ಸುದ್ದಿವಿಜಯ, ಜಗಳೂರು: ಕಾಂಗ್ರೆಸ್ ಪಕ್ಷದ ಜೋಡೆತ್ತುಗಳಾಗಿರುವ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಮತ್ತು ಕೆಪಿಸಿಸಿ ಎಸ್.ಟಿ.ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ ಅವರು ಇಂದಿನಿಂದ ಪ್ರಚಾರ ಶುರುಮಾಡಿದ್ದಾರೆ.
ಸೋಮವಾರ ಚಿಕ್ಕ ಉಜ್ಜಿನಿ ಗ್ರಾಮದಲ್ಲಿ 11 ಗಂಟೆಗೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಕ್ಯಾಸೇನಹಳ್ಳಿ ಗ್ರಾಮ ಪಂಚಾಯತಿ ಹಾಗೂ ಅಣಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಬಿ ದೇವೇಂದ್ರಪ್ಪ ಹಾಗೂ ಕೆ.ಪಿ. ಪಾಲಯ್ಯ ಜೋಡೆತ್ತುಗಳಾಗಿ ಪ್ರಚಾರ ಆರಂಭಿಸಲಿದ್ದಾರೆ.ನಿನ್ನೆ ಅರಸಿಕೆರೆ ಹೋಬಳಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ಪ್ರಚಾರ ಆರಂಭಿಸಿದ್ದರು
ಗೆಲುವಿಗೆ ಕಂಕಣಬದ್ದರಾಗಿ ನಿಂತ ಕೆ.ಪಿ.ಪಾಲಯ್ಯ:
ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲೇ ಬೇಕು ಎಂದು ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆಪಿಪಿ ಅವರು ಕಂಕಣ ಬದ್ಧರಾಗಿ ನಿಂತಿದ್ದಾರೆ. ತಮ್ಮ ಸಾಂಪ್ರದಾಯಿಕ ಮತಗಳ ಕ್ರೋಡೀಕರಣಲ್ಲಿ ಬ್ಯುಸಿಯಾಗಿದ್ದಾರೆ. ಸಂಘಟನೆಯಲ್ಲಿ ಯುವಕರನ್ನು ಸಂಘಟಿಸುವಲ್ಲಿ ಬ್ಯುಸಿಯಾಗಿದ್ದಾರೆ.
ಪಕ್ಷದ ಎಲ್ಲ ಘಟಕದ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಪಕ್ಷ ಮೊದಲು ವ್ಯಕ್ತಿ ನಂತರ ಎಂಬ ಸಿದ್ದಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟನಾ ಕಾರ್ಯವನ್ನು ಹಗಲು ರಾತ್ರಿ ಎನ್ನದೇ ಅಭ್ಯರ್ಥಿ ದೇವೇಂದ್ರಪ್ಪ ಗೆಲುವಿಗೆ ದುಡಿಯುತ್ತಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹ್ಮದ್, ಮಂಜುನಾಥ್, ಜಿಪಂ ಮಾಜಿ ಅಧ್ಯಕ್ಷರು, ತಾಪಂ ಮಾಜಿ ಅಧ್ಯಕ್ಷರು ಸೇರಿದಂತೆ ಎಲ್ಲ ಘಟಕಗಳ ಅಧ್ಯಕ್ಷರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.