ಸುದ್ದಿವಿಜಯ,ಜಗಳೂರು: ನಾನು ಶಿಕ್ಷಣ ಸಂಸ್ಥೆಯಲ್ಲಿ ಗಂಟೆ ಬಾರಿಸಿ ಕಸಗುಡಿಸುವ ಜವಾನನಾಗಿ ಸೇವೆ ಸಲ್ಲಿಸಿದ್ದೇನೆ. ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡಿದೆ. ನನಗೆ ಈ ಬಾರಿ ಮತಹಾಕಿ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಹೇಳಿದರು.
ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದಲೇ ಶಾಸಕರಾಗಿ ಅಧಿಕಾರಿ ಅನುಭವಿಸಿ ಈಗ ಸ್ವಾರ್ಥಕ್ಕಾಗಿ ಪಕ್ಷ ಬಿಟ್ಟು ಹೋಗಿರುವ ಪಕ್ಷೇತರ ಅಭ್ಯರ್ಥಿ ಎಚ್.ಪಿ.ರಾಜೇಶ್ ಮತ್ತು ಶಾಸಕ ರಾಮಚಂದ್ರ ಅವರನ್ನು ಈಗಾಗಲೇ ಶಾಸಕರನ್ನಾಗಿ ಅವರು ಕ್ಷೇತ್ರದ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ನೋಡಿದ್ದೀರಿ ಎಂದು ಅವರು ಟೀಕಿಸಿದರು.
ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿದರೆ ಕಸ ಗುಡಿಸಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತೇನೆ. ಜೋಡೆತ್ತುಗಳಾಗಿ ನನಗೆ ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ ಜೊತೆಯಾಗಿದ್ದು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಾತಾವರಣವಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಮಂಜಪ್ಪ, ಷಂಷೀರ್ ಅಹ್ಮದ್, ಜಿಲ್ಲಾಧ್ಯಕ್ಷ ಎಚ್.ಪಿ. ಮಂಜಪ್ಪ, ಕೆಪಿಸಿಸಿ ಎಸ್‍ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಯುವ ನಾಯಕ ನಿಖಿಲ್ ಕೊಂಡಜ್ಜಿ, ಕಲ್ಲೇಶ್ ರಾಜ್ ಪಟೇಲ್, ಸಣ್ಣಸೂರಯ್ಯ, ಓಮಣ್ಣ, ಬೀರಣ್ಣ, ಜಯದೇವ ನಾಯ್ಕ್, ಸುರೇಶ್ ಗೌಡ್ರು, ಮಧುಕುಮಾರ್, ಪಪಂ ಸದಸ್ಯರಾದ ಶಕೀಲ್ ಅಹ್ಮದ್, ರಮೇಶ್, ಮಹಮದ್ ಅಲಿ, ಪಲ್ಲಾಗಟ್ಟೆ ಶೇಖರಪ್ಪ ಸೇರಿದಂತೆ ಅನೇಕರು ಇದ್ದರು.