ಸುದ್ದಿವಿಜಯ,ಜಗಳೂರು: ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಅವರ ಹೆಸರು ಫೈನಲ್ ಆಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಟ್ಟಣದ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ಮಾಜಿ ಶಾಸಕರಾದ ಎಚ್.ಪಿ.ರಾಜೇಶ್ ಕರೆದಿದ್ದ ಸಭೆಯಲ್ಲೇ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸಭೆ ಮುಗಿದ ನಂತರ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಗು ದಿಢೀರನೆ ದೇವೇಂದ್ರಪ್ಪ ಅವರ ನಿವಾಸದಲ್ಲಿ ಪ್ರತ್ಯಕ್ಷರಾಗಿ ಹೂವಿನ ಹಾರ ನಿಂಬೆಹಣ್ಣು ಕೊಟ್ಟು ಅಭಿನಂದನೆ ಸಲ್ಲಿಸಿದರು.
ಕೇವಲ ಒಂದು ವರ್ಷದ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಟಿಕೆಟ್ ಗಿಟ್ಟಿಸಿಕೊಂಡ ಅವರು ಈಗ ಅಪಾರ ಅಭಿಮಾನಿಗಳು, ಕಾರ್ಯಕರ್ತರನ್ನು ಹೊಂದಿದ್ದಾರೆ.
ಅಸಮಾಧಾನಿತರ ರೆಬಲ್ ಮುಖಂಡರನ್ನು, ನ್ಯೂಟ್ರಲ್ ಮುಖಂಡರನ್ನು ಮತ್ತು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರನ್ನು ಒಟ್ಟಿಗೆ ಕೊಂಡೊಯ್ಯುವ ಕಾರ್ಯಕ್ಕೆ ತಮ್ಮದೇ ಆದ ರಣ ತಂತ್ರ ರೂಪಿಸಿದ್ದಾರೆ.
ಟಿಕೆಟ್ ಸಿಕ್ಕಿದೆ. ಹಾಗದಂತ ನಾನು ಮೈ ಮರೆಯಲ್ಲ. ಟಿಕೆಟ್ ಕೊಟ್ಟ ಕಾಂಗ್ರೆಸ್ ನಾಯಕರನ್ನು, ನನಗೆ ಬೆಂಗಾವಲಾಗಿ ನಿಂತ ಎಲ್ಲ ಮುಖಂಡಿರಗೆ ನಾನು ಆಭಾರಿಯಾಗಿದ್ದೇನೆ. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆಯಿದೆ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಚುನಾವಣಾ ತಯಾರಿಗೆ ಸಜ್ಜಾಗಿದ್ದೇನೆ.
ನನಗೆ ಚುನಾವಣೆ ಹೊಸದೇನಲ್ಲ. ಹಿಂದೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ 14 ಸಾವಿರ ಮತ ಗಳಿಸಿದ್ದೆ. ಈ ಬಾರಿ ಕಾಂಗ್ರೆಸ್ ಟಿಕೆಟ್ ಲಭ್ಯವಾಗಿದ್ದು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಸಿಹಿ ಹಂಚಿದ ಕಾರ್ಯಕರ್ತರು:
ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರಿಗೆ ಟಿಕೆಟ್ ಲಭ್ಯವಾಗುತ್ತಿದ್ದಂತೆ ಅವರ ನಿವಾಸದಲ್ಲಿ ಅಭಿಮಾನಿಗಳು ಕಾರ್ಯಕತರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಅನೇಕ ಕಾರ್ಯಕರ್ತರು ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರಿಗೆ ಜೈಯಕಾರ ಕೂಗಿದರು.