Suddivijayanews20/8/2024
ಸುದ್ದಿವಿಜಯ ಜಗಳೂರು:ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಂಗಳವಾರ ದಿ. ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ದೇವರಾಜ ಅರಸು ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು. ನಂತರ ಸಿಹಿ ಹಂಚಿದರು.
ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ ಮಾತನಾಡಿ,ಮಾಜಿ ಮುಖ್ಯಮಂತ್ರಿ ದಿ| ಡಿ. ದೇವರಾಜ ಅರಸು ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಅವರ ಸಮಾಜಮುಖೀ ಕೆಲಸಗಳು, ಪ್ರಗತಿಪರ ಯೋಜನೆಗಳು ಸ್ಮರಣೀಯ ಎಂದರು.
ಅರಸು ಅವರು, ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿನಿಲಯಗಳ ಪರಿಕಲ್ಪನೆಯನ್ನು ರಾಜ್ಯಕ್ಕೆ ಕೊಟ್ಟಿದ್ದಾರೆ.
ಸಮಾಜಕ್ಕೆ ಅವರ ಕೊಡುಗೆಗಳು ಅಪಾರ. ಇಂತಹ ಆದರ್ಶ ವ್ಯಕ್ತಿಗಳು ನಮಗೆ ಸ್ಫೂರ್ತಿಯಾಗಬೇಕು. ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ಆದರೆ ಅಂತಹ ಪುಣ್ಯಾತ್ಮನ ಜಯಂತಿಗೆ ಹಿಂದುಳಿದ ವರ್ಗದವರೇ ಬಾರದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂರ್ಭದಲ್ಲಿ ಅಶೋಕ್, ಉಮೇಧ್, ಮಂಜು ಸೇರಿದಂತೆ ಮತ್ತಿತರರಿದ್ದರು.