ಕತ್ತಿ ಹಿಡಿಯುವ ಕೈಗಳು ಲೇಖನ ಹಿಡಿಯಬೇಕು: ಶಾಸಕ ಬಿ.ದೇವೇಂದ್ರಪ್ಪ

Suddivijaya
Suddivijaya August 20, 2024
Updated 2024/08/20 at 12:47 PM

suddivijayanews20/08/08/2024

ಸುದ್ದಿವಿಜಯ, ಜಗಳೂರು: ಸಮಾಜ ಬದಲಾಗಬೇಕು ಎಂದರೆ ಶಿಕ್ಷಣವಂತರು ಹೆಚ್ಚಾಗಬೇಕು. ಕತ್ತಿ, ಖಡ್ಗ ಹಿಡಿಯುವ ಕೈಗಳಲ್ಲಿ ಲೇಖನಿ ಕೊಡಿಸಬೇಕು ಇದರ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದಿ. ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಇವರನ್ನು ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದು ಕರೆಯಲಾಗುತ್ತಿತ್ತು. ಎಲೆಕ್ಟ್ರಾನಿಕ್ ಸಿಟಿ ಕಟ್ಟಲು ಕಾರಣೀಭೂತರು ಎಂದರು.

ಮೈಸೂರು ರಾಜ್ಯ 1973 ನವೆಂಬರ್ 1ರಂದು ಕರ್ನಾಟಕ ಎಂದು ಮರುನಾಮಕರಣಗೊಂಡ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದರು. ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು.

ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ ಎಂದರು.

ಹಿಂದುಳಿದ ವರ್ಗದ ಆಯೋಗವನ್ನು ಎಲ್ ಜಿ ಹಾವನೂರು ಅವರ ನೇತೃತ್ವದಲ್ಲಿ ಸ್ಥಾಪಿಸಿದರು. ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನುಗಳನ್ನು ಜಾರಿಗೆ ತಂದರು ಎಂದರು.

ಉಪನ್ಯಾಸ ನೀಡಿದ ವಕೀಲ ಡಿ.ಶ್ರೀನಿವಾಸ್, ದೇವರಾಜು ಅರಸು ಅವರು ಬಾಲ್ಯದಿಂದಲೂ ವ್ಯವಸಾಯದ ಬಗ್ಗೆ ಆಸಕ್ತಿ ಹೊಂದಿದ್ದರು. ಸ್ವಾಭಿಮಾನಿಯಾಗಿ ಜೀವಿಸಿ ಕರ್ನಾಟಕದಲ್ಲಿ 2ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಇಡೀ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮಾಡಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಹಿಂದುಳಿದ ಸಮುದಾಯಗಳಲ್ಲಿ ವಿದ್ಯಾವಂತರನ್ನ ಗುರುತಿ ಅವರಿಗೆ ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟರು ಎಂದರು.

ಶೋಷಿತ ಸಮುದಾಯದ ಮಲ್ಲಿಕಾರ್ಜುನ್ ಖರ್ಗೆ ಅವರನ್ನ ರಾಜಕೀಯ ಕ್ಷೇತ್ರದಲ್ಲಿ ಬೆಳೆಯಲು ಸಹಕರಿಯಾಗಿದ್ದರು. ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಖ್ಯಾತಿ ಅವರಿಗಿತ್ತು.

ಭೂಸುಧಾರಣಾ ಕಾಯ್ದೆ, ಜೀತ ಪದ್ಧತಿ ನಿಷಿದ್ಧ ಕಾಯ್ದೆ, ಮಲ ಹೊರುವ ಪದ್ಧತಿ ನಿಷಿದ್ಧ ಕಾಯ್ದೆ, ಋಣ ಪರಿಹಾರ ಕಾಯ್ದೆ ಸೇರಿದಂತೆ ಅನೇಕ ಜನಪರ ಕಾಯ್ದೆಗಳನ್ನು ತಂದರು. ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಮೀಸಲಾತಿಯನ್ನು ಜಾರಿಗೆ ತಂದವರು ಎಂದರು.

ಇದೇ ವೇಳೆ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಜಾನಪದ, ಕನ್ನಡ ಚಿತ್ರಗೀತೆ ಹಾಡುಗಳಿಗೆ ವಿದ್ಯಾರ್ಥಿನಿಯರು ನೃತ್ಯಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸೈಯದ್ ಕಲೀಂಉಲ್ಲಾ, ತಾ.ಪಂ ಇಒ ಕೆಂಚಪ್ಪ, ಪಿಐ ಶ್ರಿನಿವಾಸ್, ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಬಿ.ಮಹೇಶ್ವರಪ್ಪ,

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಬಸಪ್ಪ ಬಳ್ಳಾರಿ,ವಕೀಲರ ಸಂಘದ ತಾಲೂಕಾಧ್ಯಕ್ಷ ಟಿ. ಬಸವರಾಜ್, ಸಿಡಿಪಿಓ ಬೀರೇಂದ್ರ ಕುಮಾರ್, ಪಪಂ ಸದಸ್ಯರಾದರಮೇಶ್, ಲುಕ್ಮಾನ್ ಖಾನ್, ಲಲಿತಮ್ಮ, ನಿರ್ಮಲ ಕುಮಾರಿ, ಸಿ.ತಿಪ್ಪೇಸ್ವಾಮಿ, ಬಡಯ್ಯ ಸೇರಿದಂತೆ ಮತ್ತಿತರರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!