ಸುದ್ದಿವಿಜಯ, ಜಗಳೂರು: ಮೇ.10 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ನಾಗರಿಕರು ಯಾವುದೇ ಹಣ, ಉಡುಗೊರೆ ಆಮಿಷಗಳಿಗೆ ನಿಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳಬೇಡಿ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ಗುರುವಾರ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಿದರು.
ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ತಹಶೀಲ್ದಾರ್ ಕಚೇರಿ ಮತ್ತು ಪಪಂ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ಐದು ವರ್ಷಗಳಿಗೊಮ್ಮೆ ಬರುವ ಚುನಾವಣೆಯಲ್ಲಿ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸುವ ಮತ್ತು ಜನಪರ ಕಾಳಜಿಯುಳ್ಳ ಅಭ್ಯರ್ಥಿಗೆ ನಿಮ್ಮ ಹಕ್ಕನ್ನು ನೀಡಿ. ಹಣ, ವಸ್ತು ಮತ್ತಿತರ ವಸ್ತುಗಳಿಗೆ ಆಮಿಷಗಳಿಗೆ ಬಲಿಯಾಗಬೇಡಿ ಎಂದರು.
ಪಪಂ ಚೀಫ್ ಆಫೀಸರ್ ಲೋಕ್ಯಾನಾಯ್ಕ್ ಮಾತನಾಡಿ, ಪಟ್ಟಣದ ಪೊಲಿಂಗ್ ಬೂತ್‍ನ 17 ವಾರ್ಡ್‍ಗಳಲ್ಲಿ ಶೇ.100 ರಷ್ಟು ಮತದಾನವಾಗಬೇಕು ಎನ್ನುವ ಕಾರಣಕ್ಕೆ ಎಲ್ಲ ವಾರ್ಡ್‍ಗಳಲ್ಲಿ ಜಾಥಾ ಹಮ್ಮಿಕೊಂಡಿದ್ದೇವೆ.
ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡುತ್ತಿದ್ದೇವೆ. ಕಡ್ಡಾಯವಾಗಿ ಮತದಾನದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಅರಿವು ಮೂಡಿಸುವ ಕೆಲಸವನ್ನು ನಮ್ಮ ಸಿಬ್ಬಂದಿ ಮಾಡುತ್ತಿದ್ದಾರೆ ಎಂದರು.
ಜನ ಜಾಗೃತಿ ಜಾಥಾದ ವೇಳೆ ಸಿಪಿಐ ಶ್ರೀನಿವಾಸರಾವ್, ಪಿಎಸ್‍ಐ ಡಿ.ಸಾಗರ್, ಪಪಂ ಆರೋಗ್ಯಾಧಿಕಾರಿ ಕಿಫಾಯತ್ ಅಹಮ್ಮದ್ ಸೇರಿದಂತೆ ನೂರಾರು ಕಾರ್ಮಿಕರು, ತಾಲೂಕು ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.