ಸುದ್ದಿವಿಜಯ,ಜಗಳೂರು:ಮತದಾನ ಜಾಗೃತಿ ಮೂಡಿಸುವ ಕಾರ್ಯ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಆದ್ಯ ಕರ್ತವ್ಯ ಅದಕ್ಕಾಗಿ ಸರ್ಕಾರದಿಂದಲೂ ಸಹ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಯಾನದ ಮೂಲಕ ಕಡ್ಡಾಯವಾಗಿ ಮತದಾನ ಮಾಡಿ ಉತ್ತಮ ಪ್ರತಿನಿಧಿಯನ್ನು ಆಯ್ಕೆಮಾಡಿ ಎಂದು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪಿಡಿಒ ಓಬಯ್ಯ ಹೇಳಿದರು.
ತಾಲೂಕಿನ ಅಣಬೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ಬೂತ್ ಮಟ್ಟದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೂತ್ ಮಟ್ಟದ ಜಾಗೃತಿ ಗುಂಪಿನ ಸದಸ್ಯರು ತಮ್ಮ ಮತಗಟ್ಟೆಗಳ ವ್ಯಾಪ್ತಿಯ ಮತದಾರರ ಮನೆಗಳಿಗೆ ಭೇಟಿ ನೀಡಿ ಅಣಬೂರು, ದೇವಿಪುರ,ದೊಡ್ಡ ಬೊಮ್ಮನಹಳ್ಳಿ, ಗೋಗುದ್ದು, ಅಣಬೂರು ಗೊಲ್ಲರಹಟ್ಟಿ,ತಮ್ಮ ಮತ ಕೇಂದ್ರಗಳಿಗೆ ತೆರಳಿ ಮೇ 10 ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲಾಗುತ್ತಿದೆ ಎಂದರು.
ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವ ಸಹಾಯ ಸಂಘಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದು ತಿಳಿಸಿದರು.