ಸುದ್ದಿವಿಜಯ, ಜಗಳೂರು: ಮೇ.10ರ ವಿಧಾನಸಭೆ ಚುನಾವಣೆಯ ಮತದಾನ ಹಿನ್ನೆಲೆ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಪಟ್ಟಣದ ತಾಲೂಕು ಕಚೇರಿಗೆ ಸೋಮವಾರ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಅವರು ಚುನಾವಣಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲಿನ ಭದ್ರತಾ ಕೊಠಡಿಗಳ ಪರಿಶೀಲನೆ ನಡೆಸಿದರು.
ಮಂಗಳವಾರ ನಡೆಯಲಿರುವ ಮತಗಟ್ಟೆ ಅಧಿಕಾರಿಗಳ ತರಬೇತಿಯ ಕೊಠಡಿಯನ್ನು ಪರಿಶೀಲನೆ ನಡೆಸಿ ಚುನಾವಣಾ ಅಧಿಕಾರಿ ಮತ್ತು ಸಹಾಯಕ ಚುನಾವಣೆ ಅಧಿಕಾರಿಗಳಿಗೆ ಚುನಾವಣೆಯ ಪೂರ್ವಭಾವಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಚುನಾವಣೆ ಯಾವುದೇ ಲೋಪ ದೋಷಗಳಿಲ್ಲದಂತೆ ಶಾಂತಿಯುತ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳಿಗೆ ಸೂಚನೆ ನಡೆಸಿದರು.
ಅಲ್ಲಿಂದ ಬಿದರಕೆರೆಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚುನಾವಣಾ ಸಂಬಂಧ ವಾಹನಗಳನ್ನು ಕಟ್ಟುನಿಟಿನಿಂದ ಪರಿಶೀಲನೆ ನಡೆಸಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಲ್ಲಿನ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಚುನಾವಣೆ ಅಧಿಕಾರಿ ಎಸ್ ರವಿ. ಸಹಾಯಕ ಚುನಾವಣಾ ಅಧಿಕಾರಿ ಹಾಗೂ ತಹಸಿಲ್ದಾರ್ ಜಿ.ಸಂತೋಷ್ ಕುಮಾರ್, ಪ.ಪಂ ಮುಖ್ಯಧಿಕಾರಿ ಆರ್.ಲೋಕ್ಯಾನಾಯ್ಕ, ಐ.ಕುಬೇರ್ ನಾಯ್ಕ, ಬಿಆರ್‍ಸಿ ಹಾಲೇಪ್ಪ ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.