ಸುದ್ದಿವಿಜಯ, ಜಗಳೂರು: ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆಯನ್ನು ಮಂಗಳವಾರ ಸಂಜೆ 5 ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಗೌರವಾಧ್ಯಕ್ಷ ತೋರಣಗಟ್ಟೆ ರುದ್ರಮುನಿ, ಉಪಾಧ್ಯಕ್ಷ ಆರ್.ಬಿ.ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ನಂತರ ಆರ್ಥಿಕ ಸಂಕಷ್ಟಗಳಿಗೆ ಸಿಲುಕಿರುವ ನ್ಯಾಯ ಬೆಲೆ ಅಂಗಡಿಗಳ ಮಾಲೀಕರಿಗೆ ಸರಕಾರದಿಂದ ಸರಿಯಾಗಿ ಕಮಿಷನ್ ಬರುತ್ತಿಲ್ಲ. ಅಷ್ಟೇ ಅಲ್ಲದೇ ಇ-ಕೆವೈಸಿ ಹಣ ಬಿಡುಗಡೆಯಾಗದೇ ಸಂಸಾರ ಸಾಗಿಸುವುದೇ ಕಷ್ಟವಾಗಿದೆ.
ಹೀಗಾಗಿ ನಮ್ಮ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲು ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸಭೆಗೆ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಆಗಮಿಸಲಿದ್ದು 2023ನೇ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಿದ್ದಾರೆ. ಸಭೆಯಲ್ಲಿ ತಾಲೂಕು ಅಧ್ಯಕ್ಷ ಎಂ.ಡಿ.ರಸೂಲ್ ಹಾಗೂ ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರು ಮತ್ತು ವಿಎಸ್‍ಎಸ್‍ಎನ್ ಕಾರ್ಯದರ್ಶಿಗಳು ಈ ಸಭೆಗೆ ಹಾಜರಾಗಲು ಮನವಿ ಮಾಡಿದ್ದಾರೆ.