ಸುದ್ದಿವಿಜಯ, ಜಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಯಾವುದೇ ಅಹಿತರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೇ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಶುಕ್ರವಾರ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್ ನೇತೃತ್ವದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಪಟ್ಟಣದ ದಾವಣಗೆರೆ, ಚಳ್ಳಕೆರೆ ರಸ್ತೆ, ಹೊರಕೆರೆ, ನೆಹರೂ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಗಾಂಧೀವೃತ್ತ, ಮರೇನಹಳ್ಳಿ ರಸ್ತೆ, ಸಾರ್ವಜನಿಕ ಆಸ್ಪತ್ರೆ ರಸ್ತೆ, ಮುಸ್ಲಿಂ ಕಾಲೋನಿ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್ ಮತ್ತು ಸಬ್‍ಇನ್‍ಸ್ಪೆಕ್ಟರ್ ಎಸ್.ಡಿ.ಸಾಗರ್ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.ಜಗಳೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಸಾವಜನಿಕರು ಗಣೇಶೋತ್ಸವ ಆಚರಣೆಗೂ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು ಎಂದು ಇನ್‍ಸ್ಪೆಕ್ಟರ್ ಶ್ರೀನಿವಾಸ್‍ರಾವ್ ಸಾರ್ವಜನಿಕರಿಗೆ ಮತ್ತು ಗಣೇಶೋತ್ಸವ ಸಮಿತಿ, ಸಂಘಟಕರು, ಸಂಘ ಸಂಸ್ಥೆಗಳ ಮುಖಡರೊಂದಿಗೆ ಶಾಂತಿ ಸಭೆ ಸೌಹಾರ್ದ ಸಭೆಗಳನ್ನು ನಡೆಸಿದ್ದಾರೆ ಅಹಿತರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯಾವುದೇ ಅಚಾತುರ್ಯ ನಡೆಯದಂತೆ ನೋಡಿಕೊಳ್ಳಬೇಕು. ನಿಗದಿತ ಮಾರ್ಗಗಳಲ್ಲಿ ಮೆರವಣಿಗೆ ಮಾಡಬೇಕು. ಸೂಚಿಸಿದ ಸ್ಥಳಗಳಲ್ಲೇ ಗಣೇಶ ವಿಗ್ರಹಗಳ ವಿಸರ್ಜನೆ ಮಾಡಬೇಕು.
ಡಿಜೆ ಸೌಂಡ್ ಸಿಸ್ಟಂಗೆ ಅವಕಾಶವಿಲ್ಲ. ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಲಾಗಿದೆ. ಯಾವುದೇ ಅಹಿತರ ಘಟನೆಗಳು ನಡೆದರೆ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್‍ರಾವ್ ಎಚ್ಚರಿಸಿದ್ದಾರೆ.