ಸುದ್ದಿವಿಜಯ, ಜಗಳೂರು: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಶಿಫಾರಸ್ಸಿನಂತೆ ತಾಲೂಕಿನ ಟಿ.ರುದ್ರೇಶ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಫೆ.11 ರಂದು ಭಾನುವಾರ ನೇಮಕ ಆದೇಶ ಮಾಡಲಾಗಿದೆ. ತಮಗೆ ವಹಿಸಲಾದ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸಿ.
ಮುಂದಿನ ಲೋಕಸಭಾ ಮತ್ತು ತಾಪಂ, ಜಿಪಂ ಚುನಾವಣೆಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರದ ವ್ಯಾಪ್ತಿಯಲಿ ಬರುವ ಎಲ್ಲ ಸ್ಥಳೀಯ ನಾಯಕರುಗಳ ಸಹಕಾರ ಪಡೆದು ತಮಗೆ ನೀಡಲಾಗಿರುವ ಜಾವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚನೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಪಕ್ಷ ನನ್ನನ್ನು ಗುರುತಿಸಿ ಪಕ್ಷ ಸಂಘಟನೆ ಮಾಡಲು ಹೆಚ್ಚಿನ ಜವಾಬ್ದಾರಿ ನೀಡಿದೆ. ಶಾಸಕ ಬಿ.ದೇವೇಂದ್ರಪ್ಪ,
ಕೆಪಿಸಿಸಿ ಎಸ್‍ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮತ್ತು ಕೆಪಿಸಿಸಿ ಎಸ್‍ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ.
ನನ್ನನ್ನು ಆಯ್ಕೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರ ಮಾರ್ಗದರ್ಶನದಲ್ಲಿ ರಾಜ್ಯಾದಾದ್ಯಂತ ಸುತ್ತಿ ಕಾರ್ಮಿಕರ ಹಿತದೃಷ್ಟಿ ಕಾಪಾಡುತ್ತೇನೆ ಎಂದರು.