ಜಗಳೂರಿನಲ್ಲಿ KSRTC ಡಿಪೋ ನಿರ್ಮಾಣಕ್ಕಾಗಿ ಜಾಗ ಪರಿಶೀಲಿಸಿದ ಶಾಸಕ ಬಿ.ದೇವೇಂದ್ರಪ್ಪ

Suddivijaya
Suddivijaya August 21, 2023
Updated 2023/08/21 at 12:43 PM

ಸುದ್ದಿವಿಜಯ, ಜಗಳೂರು: ಪಟ್ಟಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ksrtc ಡಿಪೋಗಾಗಿ ಜಾಗ ಪರಿಶೀಲನೆ ಮಾಡಲು ಪಟ್ಟಣದ ಮರೇನಹಳ್ಳಿ ರಸ್ತೆಯ ಪಕ್ಕದಲ್ಲಿರುವ ಸ.ನಂ 51ರ ಜಾಗ ಸೂಕ್ತವೇ ಅಥವಾ ಅಲ್ಲವೇ ಎಂಬುದನ್ನು ಸೋಮವಾರ ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹಾಗೂ ksrtc ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಬೆಂಚೆಕಟ್ಟೆ ಸಮೀಪದ ಜಾಗಕ್ಕಿಂತ ಪಟ್ಟಣಕ್ಕೆ ಹತ್ತಿರುವಿರುವ ಮರೇನಹಳ್ಳಿರಸ್ತೆಯ ಪಕ್ಕದಲ್ಲಿರುವ ಜಾಗ ಡಿಪೋ ನಿರ್ಮಾಣಕ್ಕೆ ಸೂಕ್ತವಾಗಿದೆ. ಇದಕ್ಕೆ ಬೇಕಾದ ಪಹಣಿ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ಸಂಗ್ರಹಿಸಿ ಮಾಹಿತಿ ನೀಡುವಂತೆ ಸರ್ವೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಪೋ ನಿರ್ಮಾಣವಾಗುವವರೆಗೂ ವಿದ್ಯಾರ್ಥಿಗಳು, ಕೂಲಿಕಾರರಿಗೆ ಅನುಕೂಲವಾಗಲು ಅಗತ್ಯವಿರುವ ಕಡೆ ಸರಕಾರಿ ಬಸ್‍ಗಳನ್ನು ಓಡಿಸುವಂತೆ ಕೆಎಸ್‍ಆರ್‍ಟಿಸಿ ಅಧಿಕಾರಿಗೆ ತಾಕೀತು ಮಾಡಿದರು.

 ಜಗಳೂರು ಪಟ್ಟಣದ ಮರೇನಹಳ್ಳಿ ರಸ್ತೆಯ ಪಕ್ಕದಲ್ಲಿ ಡಿಪೋ ನಿರ್ಮಾಣಕ್ಕೆ ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಜಾಗ ಪರಿಶೀಲಿಸಿದರು.
 ಜಗಳೂರು ಪಟ್ಟಣದ ಮರೇನಹಳ್ಳಿ ರಸ್ತೆಯ ಪಕ್ಕದಲ್ಲಿ ಡಿಪೋ ನಿರ್ಮಾಣಕ್ಕೆ ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಜಾಗ ಪರಿಶೀಲಿಸಿದರು.

ksrtc ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಡಿಪೋ ನಿರ್ಮಾಣ ಮಾಡುವ ಅವಶ್ಯಕತೆ ಇದ್ದು, ಆದ್ದರಿಂದ ಸೂಕ್ತ ಸ್ಥಳವನ್ನು ಗುರುತುಪಡಿಸಿಕೊಂಡು ಸರಕಾರದಿಂದ ಮಂಜೂರಾತಿ ಪಡೆದು ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ದಾವಣಗೆರೆ-ಜಗಳೂರು ಮಾರ್ಗವಾಗಿ ತಡೆ ರಹಿತ ಬಸ್‍ಗಳ ಸೇವೆಯನ್ನು ಒದಗಿಸಲಾಗುವುದು, ಅಲ್ಲದೇ ಜಗಳೂರಿನಿಂದ ಬೆಂಗಳೂರು, ಹಾಗೂ ಮಣಿಪಾಲ್ ಮಾರ್ಗ ರಾಜಹಂಸ ಬಸ್ ಓಡಿಸಲಾಗುವುದು ಎಂದು ಕೆಎಸ್‍ಆರ್‍ಟಿಸಿ ನಿಯಂತ್ರಣಾಧಿಕಾರಿ ಫಕೃದ್ದೀನ್ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ ಪಾಲಯ್ಯ, ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಪ.ಪಂ ಸದಸ್ಯ ರಮೇಶ್, ನಿವೃತ್ತ ಡಿವೈಎಸ್ಪಿ ಕಲ್ಲೇಶಪ್ಪ, ಗುತ್ತಿಗೆದಾರ ಸುಧೀರ್, ಮುಖಂಡರಾದ ಕಾನನಕಟ್ಟೆ ಪ್ರಭು, ಅನೂಪ್, ಗುರುಸಿದ್ದನಗೌಡ, ಉಪನ್ಯಾಸಕ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರಿದ್ದರು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!