ದಾವಣಗೆರೆ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದರೆ ಸ್ವಾಗತ: ಕಲ್ಲೇಶ್‍ರಾಜ್ ಪಟೇಲ್

Suddivijaya
Suddivijaya December 7, 2023
Updated 2023/12/07 at 12:23 PM

ಸುದ್ದಿವಿಜಯ, ಜಗಳೂರು: ಮಧ್ಯ ಕರ್ನಾಟಕ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದರೆ ಹೆಚ್ಚು ಮತಗಳಿಂದ ಗೆಲ್ಲಿಸಲು ನಮ್ಮೆಲ್ಲಾ ನಾಯಕರು ಸಿದ್ಧರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಲೋಕಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಲ್ಲೇಶ್‍ರಾಜ್ ಪಟೇಲ್ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದಿವಂಗತ ಇಂದಿರಾಗಾಂಧಿ ಅವರು ಚಿಕ್ಕಮಗಳೂರು ಉಡುಪಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದಾಗ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು.

ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋನಿಯಾಗಾಂಧಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು. ಆಗಲೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಗಾಂಧಿ ಕುಟುಂಬದ ನಾಯಕರು ಕರ್ನಾಟಕದಲ್ಲಿ ಸ್ಪರ್ಧೆ ಮಾಡಿದಾಗಲೆಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಈ ಬಾರಿ ರಾಹುಲ್ ಗಾಂಧಿ ನಮ್ಮ ದಾವಣಗೆರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿ ಬಳ್ಳಾರಿಯಲ್ಲಿ ಸ್ಪರ್ಧೆ ಮಾಡಿದಾಗ ಹರಪನಹಳ್ಳಿ ಬಳ್ಳಾರಿಗೆ ಸೇರಿತ್ತು. ಈಗ ದಾವಣಗೆರೆ ಕ್ಷೇತ್ರಕ್ಕೆ ಸೇರಿದೆ. ರಾಹುಲ್ ಗಾಂಧಿ ಅವರು ಸ್ಪರ್ಧೆ ಮಾಡಿದರೆ ಅವರ ಪ್ರಭಾವದಿಂದ ಕರ್ನಾಟಕದಲ್ಲಿ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದರೆ. ನನ್ನ ಸಂಪೂರ್ಣ ಬೆಂಬಲ ಹಾಗೂ ಸ್ವಾಗತವಿದೆ. ಅಲ್ಲದೆ ಜಿಲ್ಲೆಯ ಮುಖಂಡರುಗಳು ಹಾಗೂ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರೂ ಅತ್ಯಂತ ಸಂತೋಷದಿಂದ ಸ್ವಾಗತಿಸಬಹುದು. ರಾಹುಲ್ ಜೀ ಸ್ಪರ್ಧೆಸಿದರೆ ಅಕ್ಕ ಪಕ್ಕದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟರು. ಕಲ್ಲೇಶ್‍ರಾಜ್ ಪಟೇಲ್, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಕಲ್ಲೇಶ್‍ರಾಜ್ ಪಟೇಲ್, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ

ಪಂಚರಾಜ್ಯ ಚುನಾವಣೆಯಲ್ಲಿ ತಾತ್ಕಾಲಿಕ ಹಿನ್ನೆಡೆ

ಮೊನ್ನೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಾತ್ಕಾಲಿಕ ಹಿನ್ನೆಡೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷ ಒಟ್ಟು 4,90,69,462 ಮತಗಳನ್ನು ಪಡೆದಿದೆ.

ಆದರೆ ಬಿಜೆಪಿ ಪಕ್ಷ 4,81,29,325 ಮತಗಳನ್ನು ಪಡೆದಿದ್ದು, ಚುನಾವಣೆಯಲ್ಲಿ ಗೆದ್ದ ಸದಸ್ಯರಿಗಿಂತ ಅಧಿಕ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಮತದಾರ ಪ್ರಭುಗಳು ಚಲಾಯಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!