ಸುದ್ದಿವಿಜಯ,ಜಗಳೂರು: ಇದೇ ಜುಲೈ 19 ರಂದು ಬುಧವಾರ ಪಟ್ಟಣದ ತರಳಬಾಳು ಕೇಂದ್ರದಲ್ಲಿ ತಾಲೂಕಿನ ಮಹತ್ವಾಕಾಂಕ್ಷಿ ಯೋಜನೆಯಾದ 57 ಕೆರೆ ತುಂಬಿಸು ಸಂಬಂಧ ಸಾಧಕ, ಬಾಧಕಗಳ ಕುರಿತು ಚರ್ಚಿಸಲು ತರಳಬಾಳು ಶ್ರೀಗಳ ನೇತೃತ್ವದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆ ಮುಂದೂಡಲಾಗಿದೆ.
ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿಗಳು ತುರ್ತು ವಿದೇಶಿ ಪ್ರವಾಸ ಹಮ್ಮಿಕೊಂಡಿದ್ದರಿಂದ ಸಭೆ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶನಿವಾರ ಶಾಸಕರಾದ ಬಿ.ದೇವೇಂದ್ರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಸಭೆ ದಿನಾಂಕ ಮತ್ತು ಸ್ಥಳದ ಬಗ್ಗೆ ಮಾಹಿತಿ ನೀಡಿದ್ದರು.
ಆದರೆ ಶ್ರೀಗಳಿಗೆ ತುರ್ತು ಕಾರ್ಯನಿಮಿತ್ತ ವಿದೇಶಕ್ಕೆ ತೆರಳಬೇಕಾಗಿದ್ದರಿಂದ ಸಭೆ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಶ್ರೀಗಳ ಜೊತೆ ಚರ್ಚಿಸಿ ದಿನಾಂಕ, ಸಮಯ ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.