57 ಕೆರೆ ಕಾಮಗಾರಿ ವಿಳಂಬ ಪೂರ್ವಭಾವಿ ಸಭೆ: ಶಾಸಕ ಬಿ.ದೇವೇಂದ್ರಪ್ಪ!

Suddivijaya
Suddivijaya July 15, 2023
Updated 2023/07/15 at 1:21 PM

ಸುದ್ದಿವಿಜಯ, ಜಗಳೂರು: ಬರದ ತಾಲೂಕಾದ ಜಗಳೂರು ವಿಧಾನಸಭಾ ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ವಿಳಂಬ ಹಿನ್ನೆಲೆ ಜುಲೈ 19ರಂದು ಇಲ್ಲಿನ ತರಳಬಾಳು ಕೇಂದ್ರದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಗಳ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ತಿಳಿಸಿದರು.

ಇಲ್ಲಿನ ಜನ ಸಂಪರ್ಕ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ಜು.13 ರಂದು ನಡೆದ ಸದನದಲ್ಲಿ ರಾಜ್ಯಪಾಲರ ಭಾಷಣ ನಂತರ ಮಾತಾಡಲು ಅಲ್ಪ ಅವಕಾಶ ನೀಡಿದ್ದರು. ಆ ವೇಳೆ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕುರಿತು ಪ್ರಸ್ತಾಪ ಮಾಡಲಾಯಿತು ಎಂದರು.

ಜಗಳೂರಿನಲ್ಲಿ 2013ರಲ್ಲಿ ನಡೆದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಅಂದಿನ ಸಿ.ಎಂ ಸಿದ್ದರಾಮಯ್ಯ ಸಿರಿಗೆರೆಯ ಡಾ. ಶಿವಮೂರ್ತಿ ಶ್ರೀಗಳ ಆಸಯದಂತೆ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು.

ಅದರಂತೆ ತಮ್ಮ ಬಜೆಟ್ ನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿದರು. ನಂತರ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಎಚ್.ಡಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರು ಸಹಕಾರ ನೀಡಿದ್ದರು.ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರ, ಎಚ್.ಪಿ ರಾಜೇಶ್ ತುಂಬ ಹೋರಾಟ ಮಾಡಿ ಈ ಹಂತಕ್ಕೆ ಬರಲು ಪ್ರಮುಖ ಕಾರಣರಾಗಿದ್ದಾರೆ ಎಂದರು.

ಈ ಯೋಜನೆ ವಿಳಂಬಕ್ಕೆ ರಾಜಕಾರಣಿ, ಗುತ್ತಿಗೆದಾರ, ಇಲಾಖೆಯ ಅಧಿಕಾರಿಗಳು ಕಾರಣವಾಗಿದ್ದಾರೆ. ಸುಮ್ಮನೆ ಇರಲು ನಾನು ಬಿಡುವುದಿಲ್ಲ. ಆದಷ್ಟು ಬೇಗ ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲ ಹಂತದಲ್ಲಿ 11ಕೆರೆಗಳಿಗೆ ನೀರು ಬರಲಿದೆ, ಹಂತ ಹಂತದಲ್ಲಿ ಎಲ್ಲಾ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದರು.

ತಾಲೂಕಿನ ಜನತೆಗೆ ಈ ಯೋಜನೆ ಮಹತ್ವದ್ದಾಗಿದೆ. ಪಕ್ಷ ಭೇದ ಮರೆತು ಈ ಸಭೆಯಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ್, ಮಾಜಿ ಶಾಸಕರಾದ ಎಸ್.ವಿ ರಾಮಚಂದ್ರ, ಎಚ್.ಪಿ ರಾಜೇಶ್ ಅವರನ್ನು ಆಹ್ವಾನಿಸಲಾಗಿದೆ ಎಂದರು.

ನೀರಾವರಿ ಇಲಾಖೆಯ ಎಂ.ಡಿ ಮಲ್ಲಿಕಾರ್ಜುನ ಗುಂಗೆ, ಕರ್ನಾಟಕ ನೀರಾವರಿ ನಿಗದಮ ಎಕ್ಸಿಕಿಟಿವೂ ಎಂಜಿನಯರ್‍ಗಳು, ಎಇಇ ಗಳು ಜಿಲ್ಲೆಯ ಅಧಿಕಾರಿಗಳು, ಇಂಜಿನಿಯರ್ ಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ ಪಾಲಯ್ಯ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್,ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಪಟೇಲ್, ಪ.ಪಂ ಸದಸ್ಯರಾದ ರಮೇಶ್ ರೆಡ್ಡಿ, ಅರಿಶಿಣಗುಂಡಿ ಮಂಜುನಾಥ್, ರವಿಕುಮಾರ್, ಮಹಮದ್, ಮುಖಂಡರಾದ ಪ್ರಕಾಶ್ ರೆಡ್ಡಿ, ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!