ವಸತಿ ಶಾಲೆ ಕಾಮಗಾರಿ ಗುಣಮಟ್ಟಕ್ಕೆ ಶಾಸಕ ದೇವೇಂದ್ರಪ್ಪ ಸೂಚನೆ

Suddivijaya
Suddivijaya June 29, 2023
Updated 2023/06/29 at 1:00 PM

ಸುದ್ದಿವಿಜಯ,ಜಗಳೂರು: ಮಕ್ಕಳು ವಾಸಿಸುವ ವಸತಿ ಶಾಲೆಗಳ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಿ. ಶೀಘ್ರವೇ ಕಾಮಗಾರಿ ಮುಕ್ತಾಯಗೊಳಿಸಿ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಹೊಸಹಟ್ಟಿ ಗ್ರಾಮದ ಬಳಿ ನಿರ್ಮಾಣದ ಹಂತದಲ್ಲಿರುವ  ಡಾ.ಬಿ.ಆರ್‌ ಅಂಬೇಡ್ಕರ್‌ ವಸತಿಯುತ ಶಾಲೆಗೆ ಗುರುವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಕಾಮಗಾರಿ ಆರಂಭವಾಗಿ ಎಷ್ಟು ವರ್ಷವಾಯಿತು. ಯಾವಾಗ ಪೂರ್ಣಗೊಳಿಸಲಾಗುತ್ತದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ  ನೀಡುವ ಉದ್ದೇಶದಿಂದ ಸರಕಾರದ ವಸತಿಯುತ ಶಾಲೆಗಳನ್ನು ಮಂಜೂರು ಮಾಡಿದೆ.

ತಾಲೂಕಿನಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ದೇಸಾಯಿ ಶಾಲೆ ಸೇರಿದಂತೆ ಮೂರು ಶಾಲೆಗಳಿದ್ದು, ಹೊಸದಾಗಿ ನಿರ್ಮಾಣವಾಗುತ್ತಿರುವ ಶಾಲೆ ಸೇರಿದಂತೆ ಒಟ್ಟು 5 ವಸತಿ ಶಾಲೆಗಳಿದ್ದು ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಅವಶ್ಯಕತೆ ಇದ್ದರೇ ನಮ್ಮ ಸರಕಾರದ ಅವದಿಯಲ್ಲಿ ವಸತಿಶಾಲೆಗಳನ್ನು ಮಂಜೂರು ಮಾಡಿಸಲಾಗುವುದು ಎಂದರು.

ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಯವರೆಗೂ ಓದಲು ಅವಕಾಶವಿದ್ದು ಪಿಯುಸಿಯನ್ನು ಮಾಡುವುದರಿಂದ ಬೇರೆ ಜಿಲ್ಲೆಗಳ ಪ್ರತಿಷ್ಠಿತ ಕಾಲೇಜುಗಳಿಗೆ ಹೋಗುವುದನ್ನು ತಪ್ಪಿಸುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು,

ಇದು ರಾಜ್ಯಕ್ಕೆ ಸಂಬಂಧಪಟ್ಟಿರುವುದರಿಂದ ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿ ಗಮನಕ್ಕೆ ತರಲಾಗುವುದು ಎಂದರು.

ವೀರಪ್ಪ ಮೋಯ್ಲಿಯವರು ಸಿ.ಎಂ ಅವಧಿಯಲ್ಲಿ ರಾಜ್ಯದಲ್ಲಿ  ಶೈಕ್ಷಣಿಕ ಕ್ರಾಂತಿ ಮಾಡುವುದರ ಜತೆಗೆ ಹಲವು ವಿಶ್ವವಿದ್ಯಾಲಯ ಸ್ಥಾಪಿಸಿ,  ಸಿಇಟಿ ಜಾರಿಗೆ ತಂದಿದ್ದಾರೆ.

ತಮ್ಮ ಅವದಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತಂದು ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ನೆನೆದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಬಿ.ಮಹೇಶ್ವರಪ್ಪ, ಇಂಜಿನಿಯರ್‌ ಚೇತನ್‌, ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್‌ ಪಟೇಲ್‌, ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ನಿವೃತ್ತ ಅಧಿಕಾರಿ ಸಿ.ತಿಪ್ಪೇಸ್ವಾಮಿ,  ಮುಖಂಡರಾದ ಹಟ್ಟಿ ತಿಪ್ಪೇಸ್ವಾಮಿ, ಮಾಳಮ್ಮನಹಳ್ಳಿ ವೆಂಕಟೇಶ್‌, ತಿಮ್ಮಣ್ಣ, ಸಿ.ಎಂ ಹೊಳೆ ಮಾರುತಿ, ದುರುಗೇಶ್‌, ಲೋಕೇಶ್‌, ಆಪ್ತ ಸಹಾಯಕ ಶಿವರಾಜ್‌ ಸೇರಿದಂತೆ ಮತ್ತಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!