ಜಗಳೂರು:ರೈತರ ಬೇಡಿಕೆ ಈಡೇರಿಸದಿದ್ದರೆ ಸರಕಾರದ ವಿರುದ್ಧ ಹೋರಾಟ-ಹುಚ್ಚವ್ವನಹಳ್ಳಿ ಮಂಜುನಾಥ್

Suddivijaya
Suddivijaya June 27, 2023
Updated 2023/06/27 at 2:21 PM

ಸುದ್ದಿವಿಜಯ,ಜಗಳೂರು: ರೈತರ ಹಿತ ಕಾಯುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ನಮ್ಮ ಬೇಡಿಕೆ ಹಿಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಎಚ್ಚರಿಸಿದರು.

ತಾಲ್ಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದಲ್ಲಿ ಮಂಗಳವಾರ ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹುಚ್ಚವ್ವಹಳ್ಳಿ ಮಂಜುನಾಥ್ ಬಣ ಗ್ರಾಮ ಸಮಿತಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ರೈತರಿಗೆ ಹಗಲು ಎಂಟು ತಾಸು ವಿದ್ಯುತ್ ಸಂಪರ್ಕ, ಕನಿಷ್ಟ ಬಿಂಬಲ ಬೆಲೆ ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ಧನ ಸೇರಿದಂತೆ ರೈತ ಪರಿಹಾರ ನಿಧಿ ಸ್ಥಾಪಿಸಬೇಕಿದೆ. ಕೊಟ್ಟ ಮಾತಿನಂತೆ ನೆಡೆದು ಕೊಳ್ಳದಿದ್ದರೆ ಹೋರಾಟ ನಿಶ್ಚಿತ ಎಂದು ಹೇಳಿದರು.

ರೈತರು ತಮಗೆ ತೊಂದರೆ ಆದರೆ ಕೂಡಲೇ ತಾಲ್ಲೂಕು ಸಮಿತಿ ಗಮನಕ್ಕೆ ತಂದರೆ ಅದನ್ನ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸೌಲಭ್ಯ ಕೊಡಲು ನಮ್ಮಸಮಿತಿ ಸದಾ ಬದ್ಧವಾಗಿದೆ ರೈತರು ಸ್ವಾವಲಂಬಿಗಳಾಗಿ ಜೀವನನೆಡೆಸಿ ಎಂದರು.

ಜಿಲ್ಲಾ ರೈತ ಮುಖಂಡ ಕಾನನಕಟ್ಟೆ ತಿಪ್ಪೇಸ್ವಾಮಿ ಮಾತನಾಡಿ, ತಾಲ್ಲೂಕಿನ ರೈತರ ಜ್ವಲಂತ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಅಧಿಕಾರಿಗಳು ಧ್ವನಿಯಾಗ ಬೇಕು ಮುಂಗಾರು ಕೈಕೊಟ್ಟ ಪರಿಣಾಮ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ವಿದ್ಯುತ್, ನೀರಾವರಿ ಸೌಲಭ್ಯ, ಗ್ರಾಮೀಣ ಭಾಗದ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸಬೇಕಿದೆ.

ಭವಿಷ್ಯದಲ್ಲಿ ಅಗತ್ಯವಾಗ ಮೇವು ಸಂಗ್ರಹಣೆ ಮಾಡಿ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ರೈತರಿಗೆ ಪರಿಹಾರ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನ ಶೀಘ್ರವೇ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಗೌರವಾಧ್ಯಕ್ಷ ಗಂಗಾಧರಪ್ಪ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಚಿಕ್ಕಬನ್ನಿಹಟ್ಟಿ ವೀರೇಶಪ್ಪ ಕಾರ್ಯದರ್ಶಿ ರಾಜನಹಟ್ಟಿ ರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ಹೊಳೆ ಚಿರಂಜೀವಿ, ಕಾರ್ಯದರ್ಶಿ ಸತೀಶ್, ಗ್ರಾ.ಪಂ.ಸದಸ್ಯರಾದ ಪರಮೇಶ್ವರಪ್ಪ, ಚಂದ್ರಪ್ಪ, ಬಸವರಾಜ್ ಗ್ರಾಮ ಘಟಕ ಆದ್ಯಕ್ಷ ಧರ್ಮಪ್ಪ ಸೇರಿದಂತೆ ರಾಜ್ಯ ರೈತ ಸಂಘದ ಅಧ್ಯಕ್ಷರು ಪಧಾದಿಕಾರಿಗಳು ಗ್ರಾಮಸ್ಥರು ಇದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!