ಸುದ್ದಿವಿಜಯ, ಜಗಳೂರು: ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿ(ಎಫ್‍ಪಿಒ)ಗೆ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ, ಜಲಾನಯನ ಅಭಿವೃದ್ಧಿ ಯೋಜನೆ (ಡಬ್ಯೂಡಿಸಿ-2.0) ಅಡಿಯಲ್ಲಿ 10.50 ಲಕ್ಷ ರೂ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಗೋದಾಮು ಗುರುವಾರ ಉದ್ಘಾಟನೆಯಾಗಲಿದೆ.
ನೂತನ ಶಾಸಕ ಬಿ.ದೇವೇಂದ್ರಪ್ಪ ಅವರು ಗೋದಾಮು ಮತ್ತು ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಎಚ್.ಪಿ.ರಾಜೇಶ್ ಮತ್ತು ಎಸ್.ವಿ.ರಾಮಚಂದ್ರ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಉಪಕೃಷಿ ನಿರ್ದೇಶಕ ಆರ್.ತಿಪ್ಪೇಸ್ವಾಮಿ, ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್, ಎಡಿಎ ಸಿ.ಮಿಥುನ್ ಕಿಮಾವತ್, ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ, ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್.ದೇವರಾಜ, ಕೃಷಿ ವಿಜ್ಞಾನಿಗಳಾದ ಬಿ.ಓ. ಮಲ್ಲಿಕಾರ್ಜುನ, ತಾಪಂ ಇಓ ವೈ.ಎಚ್.ಚಂದ್ರಶೇಖರ್, ಎಫ್‍ಪಿಒ ಅಧ್ಯಕ್ಷ ಎಂ.ಎಚ್.ಮಂಜುನಾಥ್ ಕಂಪನಿಯ ನಿರ್ದೇಶಕರು ಸೇರಿದಂತೆ ಸಾವಿರ ರೈತ ಷೇರುದಾರರು ಭಾಗವಹಿಸಲಿದ್ದಾರೆ.