ಸುದ್ದಿವಿಜಯ, ಜಗಳೂರು: ಪಟ್ಟಣದ ದೇವೇಗೌಡ ಬಡಾವಣೆಯಲ್ಲಿ ಮಂಜುನಾಥ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಗಳೂರು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆಯ ವಿವರ: ಮಂಜುನಾಥ್ ಎಂಬುವರ ಮನೆಯಲ್ಲಿ ಕಳೆದ ನ.11.2022 ರಂದು 60 ಗ್ರಾಂ ಬಂಗರ, 6.328 ಗ್ರಾಂ ಬೆಳ್ಳಿ ಸಾಮಾನುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚುವರಿ ಸಹಾಯಕ ಪೊಲೀಸ್ ಅಧೀಕ್ಷಕರಾದ ಕನ್ನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ, ಪಿಎಸ್‍ಐ ಎಂ.ಶ್ರೀನಿವಾಸ್ ರಾವ್ ಅವರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ.
ಪೊಲೀಸ್ ಸಿಬ್ಬಂದಿಗಳಾದ ಮಾರುತಿ, ಬಸವರಾಜ್ ಪಟ್ಟಣದ ಹೊರವಲಯದಲ್ಲಿ ಗಸ್ತಿನಲ್ಲಿದ್ದಾಗ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ವಿಚಾರಣೆಗೆ ಒಳಡಿಸಿದಾಗ ಆ ವ್ಯಕ್ತಿಯು ಮಂಜುನಾಥ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ.
ಈ ವ್ಯಕ್ತಿಯ ಮೇಲೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಒಂದು ಪ್ರಕರಣ, ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ಚಿಕ್ಕಮಗಳೂರು ಜಿಲ್ಲೆ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿದು ಬಂದಿದೆ.
ಆರೋಪಿಯಿಂದ 25 ಲಕ್ಷರು ಬೆಲೆ ಬಾಳುವ 503 ಗ್ರಾಂ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಉಳಿದ ಕಳುವಾದ ವಸ್ತುಗಳ ಬಗ್ಗೆ ವಿಚಾರಣೆಗೆ ಒಳಪಡಿಸಿದಾಗ ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪಿಎಸ್‍ಐ ಡಿ.ಸಾಗರ್, ಪೊಲೀಸ್ ಸಿಬ್ಬಂದಿಗಳಾದ ಬಸವರಾಜ್, ಮಾರುತಿ, ನಾಗಭೂಷಣ್, ಹನುಮಂತ ಕವಾಡಿ, ದಾವಣಗೆರೆ ಗ್ರಾಮಾಂತರ ಉಪವಿಭಾಗದ ಸಿಬ್ಬಂದಿ ಯಾಸೀನ್ ಉಲ್ಲಾ, ಎಎಸ್‍ಐ ಸೈಯದ್ ಗಫಾರ್, ನಾಗರಾಜಯ್ಯ, ರಾಘವೇಂದ್ರ ಮತ್ತು ಶಾಂತಕುಮಾರ್ ಇವರ ಕಾರ್ಯವೈಖರಿಗೆ ಪೊಲಿಸ್ ಇಲಾಖೆ ಹಿರಿಯ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದಾರೆ.