suddivijayanews15/08/2024
ಸುದ್ದಿವಿಜಯ, ಜಗಳೂರು: ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತಿದೆ. ಆದರೆ ಅತಿಯಾದ ವೇಗ, ಅಜಾಗರೂಕತೆ ಚಾಲನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ನಮ್ಮ ಪೊಲೀಸ್ ಸಿಬ್ಬಂದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಇನ್‍ಸ್ಪೆಕ್ಟರ್ ಎಂ.ಶ್ರೀನಿವಾಸ್ ರಾವ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ 78ನೇ ಸ್ವಾತಂತ್ರೋತ್ಸವ (independence day celebration)ಹಿನ್ನೆಲೆ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿ, ಬುಧವಾರ ಪಟ್ಟಣದಲ್ಲಿ ಭೀಕರವಾದ ಅಪಘಾತಕ್ಕೆ ಎರಡು ಜೀವಗಳು ಬಲಿಯಾದವು.
ರಸ್ತೆಯ ಇಕ್ಕೆಲಗಳಲ್ಲಿ ದ್ವಿಚಕ್ರಮ ಪಾರ್ಕಿಂಗ್ ಹೆಚ್ಚಾಗುತ್ತಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿದೆ. ನಿಯೋಜಿಸಿರುವ ಸಿಬ್ಬಂದಿಗಳು ನಿಮ್ಮ ಏರಿಯಾಗಳಲ್ಲಿ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು.
ಪಟ್ಟಣದ ಚಳ್ಳಕೆರೆ ಗೇಟ್, ಎಂಜಿ ವೃತ್ತ ಮತ್ತು ಅಂಬೇಡ್ಕರ್ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಕಾನೂನು ಮೀರಿ ವಾಹನ ಚಾಲನೆ ಮಾಡುವ ಸವಾರರಿಗೆ ಹದ್ದಿನಕಣ್ಣಿಟ್ಟು ಕಾಯುತ್ತಿದ್ದೇವೆ. ನಿಯಮ ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಇನ್‍ಸ್ಪೆಕ್ಟರ್ ಡಿ.ಶ್ರೀನಿವಾಸ್‍ರಾವ್ ಅವರು ಪಿಎಸ್‍ಐ ಮಂಜುನಾಥ್‍ಸ್ವಾಮಿ, ಪಿಎಸ್‍ಐ ಆಶಾ ಸೇರಿದಂತೆ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಸಹಿ ಹಂಚಿ ಸ್ವಾತಂತ್ರೋತ್ಸವ ಶುಭಾಶಯ ಕೋರಿದರು.