ನಾಳೆ ಜಗಳೂರು ಸೇರಿ ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಕಟ್

Suddivijaya
Suddivijaya June 24, 2023
Updated 2023/06/24 at 12:45 PM

ಸುದ್ದಿವಿಜಯ, ಜಗಳೂರು: ಪಟ್ಟಣದ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ದುರಸ್ತಿಕಾರ್ಯ ಇರುವ ಕಾರಣ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪಟ್ಟಣ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಇಇ ರಾಮಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಣಬೂರು, ಅರಿಶಿಣಗುಂಡಿ, ರಸ್ತೆಮಾಚಿಕೆರೆ ಭಾಗದ ಲೈಲ್‍ಗಳು ಸೇರಿದಂತೆ ಒಟ್ಟು 40 ಹಳ್ಳಿಗಳಿಗೆ ವಿದ್ಯುತ್ ವ್ಯತ್ಯಯವಾಗುತ್ತದೆ. ಈ ವೇಳೆ ಎನ್‍ಜೆವೈ ಮಾರ್ಗಗಳು ಮತ್ತು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಸಹಕರಿಸಲು ಮನವಿ ಮಾಡಿದ್ದಾರೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!