ಸುದ್ದಿವಿಜಯ, ಜಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಶನಿವಾರ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸಂಭ್ರಮಿಸಿದರು. .
ಪ.ಪಂ ಸದಸ್ಯ ರಮೇಶ್‍ರೆಡ್ಡಿ ಮಾತನಾಡಿ, ಸಿದ್ದರಾಮಯ್ಯನವರು ಅಹಿಂದ ವರ್ಗದ ಹಾಗೂ ಕಾಂಗ್ರೆಸ್‍ನ ಪ್ರಭಾವಿ ನಾಯಕರಾಗಿದ್ದಾರೆ. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಜನರನ್ನು ಒಗ್ಗೂಡಿಸಿದ್ದಾರೆ. ಮೊದಲ ಬಾರಿ ಸಿ.ಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆಗಳು ಅಪಾರವಾಗಿದೆ. ಇದೀಗ ಎರಡನೇ ಬಾರಿ ಸಿ.ಎಂ ಆಗುತ್ತಿರುವುದು ತುಂಬ ಸಂತಸ ತಂದಿದೆ ಎಂದರು.
ಕಳೆದ ಬಿಜೆಪಿ ಸರಕಾರ ಅವದಿಯಲ್ಲಿ ನಡೆದ ಭ್ರಷ್ಟಚಾರ, ಶೇ.40 ಪಸರ್ಂಟೇಜ್ ಹೀಗೆ ಅನೇಕಾರು ಆರೋಗಳನ್ನು ಹೊತ್ತಿದ್ದ ಬಿಜೆಪಿ ರಾಜ್ಯದ ಜನತೆ ತಕ್ಕ ಉತ್ತರ ಕೊಟ್ಟಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಎಲ್ಲವನ್ನು ಈಡೇರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಶಕೀಲ್, ಮಹಮದ್, ರವಿಕುಮಾರ್, ಮುಖಂಡರಾದ ಜೀವಣ್ಣ, ಮಾಳಮ್ಮನಹಟ್ಟಿ ವೆಂಕಟೇಶ್, ಡಿ.ಆರ್ ಹನುಮಂತಪ್ಪ, ನಿವೃತ್ತ ಉಪನ್ಯಾಸಕ ತಿಮ್ಮರಾಜ್ ಸೇರಿದಂತೆ ಮತ್ತಿತರಿದ್ದರು.