ಸುದ್ದಿವಿಜಯ, ಜಗಳೂರು: ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಮಕರ ಸಂಕ್ರಾಂತಿ ಹಿನ್ನೆಲೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಶಿರಿಡಿ ಸಾಯಿ ಬಾಬಾ ಮಂದಿರದಲ್ಲಿ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಮಂಡಲ ಪೂಜೆ, ಮಹಾರುದ್ರಾಭಿಷೇಕ, ಹೋಮ, ಪೂರ್ಣಾವತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದು ಗ್ರಾಪಂ ಮಾಜಿ ಅಧ್ಯಕ್ಷೆ ಹಾಗೂ ದಿಶಾ ಸಮಿತಿ ಸದಸ್ಯೆ ಸ್ವಾತಿ ತಿಪ್ಪೇಸ್ವಾಮಿ ಹೇಳಿದರು.
ಸೋಮವಾರ ಸಂಜೆ ಸಾಂಸ್ಕೃತಿಕ ಮತ್ತು ಭಜನಾ ಮಂಡಳಿಯವರಿಗೆ ದೇವಸ್ಥಾನದ ವತಿಯಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಮಹಾ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ.ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಶ್ರೀ ಶಿರಿಡಿ ಸಾಯಿ ಬಾಬಾ ಮಂದಿರ ಮತ್ತು ಮೂರ್ತಿ
ಮಂಗಳವಾರ ಬ್ರಾಹ್ಮೀ ಮುಹೋರ್ತದಲ್ಲಿ ಮಂಡಲ ಪೂಜೆ, ರುದ್ರಾಭಿಷೇಕ, ಹೋಮ, ಪೂರ್ಣಾವತಿ ಕಾರ್ಯಕ್ರಮಗಳು ನೆರವೇರಲಿವೆ. ಸುತ್ತೂರಿನ ರಾಜೇಂದ್ರ ಮಹಾಸ್ವಾಮೀಜಿಗಳ ಆಶೀರ್ವಾದಿಂದ ಮಂದಿರ ನಿರ್ಮಾಣದ ಪ್ರೇರಣೆಯಾಗಿದ್ದು,
ತಿಪಟೂರಿನ ವಿರಕ್ತಮಠದ ಶ್ರೀ ಕಾಡಸಿದ್ದೇಶ್ವರ ಮಹಾ ಸಂಸ್ಥಾನ ಮಠ ನೊಣವಿನಕೆರೆಯ ಡಾ.ಶಿವಾನುಭವ ಚರವರ್ಯ ಕರಿವೃಷಭದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಗಳು ಮತ್ತು ವಿಜಯನಗರ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಪೀಠಾಧಿಪತಿ ಮಹಾಂತ ವಿದ್ಯಾದಾಸ ಬಾಬರು ಮಂಗಳವಾರದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಶ್ರೀಗಳ ಪ್ರವಚನ ಕಾರ್ಯಕ್ರಮ ಮತ್ತು ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರಿನ ನಿರ್ದೇಶಕ ಡಾ.ಸತೀಶ್‍ಕುಮಾರ್ ಎಸ್.ಹೊಸಮನಿ, ಪ್ರೊ.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ.