ಸುದ್ದಿವಿಜಯ, ಜಗಳೂರು: ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ನೂತನ ದೇವಳದ ಪ್ರಾರಂಭೋತ್ಸವ, ವಿಮಾನ ಗೋಪುರ, ಕಳಸಾರೋಹಣ ಮತ್ತು ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಕಾರ್ಯಕ್ರಮ ನ.22 ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಮೈಸೂರಿನ ಸುತ್ತೂರು ಕ್ಷೇತ್ರದ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ತಿಪಟೂರು ತಾ. ನೊಣವಿನಕೆರೆ ವಿರಕ್ತ ಮಠದ ಡಾ.ಶಿವಾನುಭವ ಚರವರ್ಯ ಕರಿವೃಷಭದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿ ಮತ್ತು ನಮ್ಮ ತಾಲೂಕಿನ ಕಣ್ವಕುಪ್ಪೆ ಗವಿಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟನೆಗೆ ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಶಾಸಕ ಬಿ.ದೇವೇಂದ್ರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಎನ್.ಚಲುವರಾಯಸ್ವಾಮಿ, ಡಿ.ಸುಧಾಕರ್, ಶಾಸಕರಾದ ಉದಯ್ ಬಿ.ಗರುಡಾಚಾರ್,ಪಿ.ರವಿಕುಮಾರ್, ಬಸವರಾಜ್ ಶಿವಗಂಗಾ, ಡಾ.ಶ್ರೀನಿವಾಸ್, ಕೆ.ಸಿ.ವೀರೇಂದ್ರ, ಟಿ.ರಘುಮೂರ್ತಿ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ, ಆರ್‍ಎಸ್‍ಎಸ್ ಕಾರ್ಯವಾಹ ಎನ್.ತಿಪ್ಪೇಸ್ವಾಮಿ, ರಾಜ್ಯ ಪಿಸಿಬಿ ಅಧ್ಯಕ್ಷ ಡಾ.ಶಾಂತ ಎ. ತಿಮ್ಮಯ್ಯ, ಜೆ.ಈ.ಶಶಿಧರ್, ಗ್ರಂಥಾಲಯ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ,
ಚಿತ್ರನಟ ನಾಗಭೂಷಣ್, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ್, ತಿಪ್ಪರಾಜು ಹವಾಲ್ದಾರ್, ಮತ್ತು ಚಿತ್ರನಟ ಡಾಲಿ ಧನಂಜಯ, ಪರಿಷತ್ ಸದಸ್ಯ ನವೀನ್, ಸಾಯಿಬಾಬಾ ಮಂದಿರದ ಮುಖ್ಯಸ್ಥ ಎನ್.ಕೆ.ಬಾಲಗಂಗಾಧರ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಗಾಪಂ ಅಧ್ಯಕ್ಷ ಎಲ್.ತಿರುಮಲ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.