ಜಗಳೂರು:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವುದೇ ಆಸ್ತಿ: ಶಾಸಕ ಬಿ.ದೇವೇಂದ್ರಪ್ಪ

Suddivijaya
Suddivijaya August 23, 2023
Updated 2023/08/23 at 2:31 PM

ಸುದ್ದಿವಿಜಯ,ಜಗಳೂರು;ಸಮಾಜದಲ್ಲಿ  ಆಸ್ತಿ, ಅಂತಸ್ತು ಗಳಿಸುವುದಕ್ಕಿಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದೇ ದೊಡ್ಡ ಆಸ್ತಿ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ  ಹೇಳಿದರು.

ತಾಲೂಕಿನ ಅಣಬೂರು ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲಾ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ  2022-23ನೇ ಸಾಲಿನ  ಪೂರ್ವ ವಲಯಮಟ್ಟದ  ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಗಳೂರು ತಾಲ್ಲೂಕು ಅಣಬೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ  2022-23ನೇ ಸಾಲಿನ  ಪೂರ್ವ ವಲಯಮಟ್ಟದ  ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ದೇವೇಂದ್ರಪ್ಪ ಚಾಲನೆ ನೀಡಿದರು.
ಜಗಳೂರು ತಾಲ್ಲೂಕು ಅಣಬೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ  2022-23ನೇ ಸಾಲಿನ  ಪೂರ್ವ ವಲಯಮಟ್ಟದ  ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ದೇವೇಂದ್ರಪ್ಪ ಚಾಲನೆ ನೀಡಿದರು.

ಡಾ.ಬಿ.ಆರ್ ಅಂಬೇಡ್ಕರ್ ಬಾಲ್ಯದಲ್ಲಿ ಅನುಭವಿಸಿದ ಜಾತಿಯತೆ, ಅಸಮಾತೆಯಿಂದ ಓದಿನಿಂದ ವಂಚಿತರಾಗಿದ್ದರೆ  ಭಾರತದ ಸಂವಿಧಾನ ಬರೆಯುತ್ತಿರಲಿಲ್ಲ. ದೇಶದಲ್ಲಿ ಸಮಾನತೆ ಸಿಗುತ್ತಿರಲಿಲ್ಲ.

ಹಾಗಾಗಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ  ಸಮಾಜದ  ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದರು.

ಪಠ್ಯ ಜ್ಞಾನವನ್ನು ವೃದ್ದಿಸಿದರೇ, ಕ್ರೀಡೆ ದೈಹಿಕ ಮತ್ತು ಮಾನಸಿಕ ಒತ್ತಡಗಳಿಂದ ದೂರ ಮಾಡುತ್ತದೆ. ಪ್ರತಿಯೊಬ್ಬ ಮನುಷ್ಯ ಕ್ರೀಡೆಯನ್ನು ಅಳವಡಿಸಿಕೊಳ್ಳಬೇಕು.

ಕ್ರೀಡಾ ಕ್ಷೇತ್ರದಲ್ಲಿ ಪುರುಷರಷ್ಟೆ ಮಹಿಳೆಯರು ಉತ್ತಮ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಕ್ರೀಡೆಯನ್ನು ಪ್ರೋತ್ರಹಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಬಿ.ಮಹೇಶ್ವರಪ್ಪ, ಮುಖ್ಯ ಶಿಕ್ಷಕ ಕುಮಾರ್‌ನಾಯ್ಕ, ಗ್ರಾ.ಪಂ ಸದಸ್ಯರಾದ  ವೀರೇಶ್, ಬಿ.ಕೆ ಈರಪ್ಪ,

ಕವಿತಾ ರೇಣುಕೇಶ್,  ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಮುಖಂಡ ಮಹಮದ್ ಗೌಸ್, ದೈಹಿಕ ಶಿಕ್ಷಕರ ದಂಘದ  ಅಧ್ಯಕ್ಷ  ಸುರೇಶ್‌ರೆಡ್ಡಿ, ಸಿದ್ದಮ್ಮನಹಳ್ಳಿ ನಿಂಗರಾಜ್ ಸೇರಿದಂತೆ ಮತ್ತಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!