ಜಗಳೂರು:ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಅವಶ್ಯಕ: ಶಾಸಕ ಬಿ.ದೇವೇಂದ್ರಪ್ಪ

Suddivijaya
Suddivijaya August 4, 2023
Updated 2023/08/04 at 1:59 PM

ಸುದ್ದಿವಿಜಯ, ಜಗಳೂರು:ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯಷ್ಟೇ ಕ್ರೀಡೆಗೂ ಮಹತ್ವಕೊಡಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ, ದೈಹಿಕವಾಗಿ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಇಲ್ಲಿನ ಬೇಡರಕಣ್ಣಪ್ಪ ವಸತಿಯುತ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಎಸ್‍ಇಎಸ್ ಮಾಡ್ರನ್ ಶಾಲೆ ಇವರ ಸಹಯೋಗದಲ್ಲಿ 2023-24ನೇ ಸಾಲಿನ ಹಿರಿಯ ಪ್ರಾಥಮಿಕ ಶಾಲೆಗಳ ಜಗಳೂರು ಟೌನ್ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ ತೊಡಗಿಕೊಂಡು ಉತ್ತಮ ಆಹಾರ ಪದಾರ್ಥಗಳನ್ನು ಸೇವಿಸಿ ನೂರಾರು ವರ್ಷಗಳ ಕಾಲ ಜೀವ ನಡೆಸಿದ್ದಾರೆ. ಆಧುನಿಕತೆ ಹೆಚ್ಚಾದಂತೆ ಮನುಷ್ಯ ಹಲವು ರೀತಿಯ ರೋಗಗಳಿಗೆ ಒಳಗಾಗುತ್ತಿದ್ದಾನೆ.

ಈ ನಿಟ್ಟಿನಲ್ಲಿ ಮನುಷ್ಯ ಆರೋಗ್ಯವಾಗಿ ಜೀವನ ನಡೆಸಲು ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟ ಉತ್ತಮ ವೇದಿಕೆ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇಂಥ ಕಾರ್ಯಕ್ರಮ ಹೆಚ್ಚು ಆಯೋಜನೆಯಾಗಬೇಕು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಕ್ರೀಡಾಕೂಟ ಯಶಸ್ವಿಗೊಳಿಸಬೇಕು ಎಂದು ಆಶಿಸಿದರು.

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಡೆಗಳಿಂದ ಜೀವನದಲ್ಲಿ ಉತ್ಸಾಹ ಮೂಡುತ್ತದೆ. ನಾವು ಮಾಡುವ ಕೆಲಸ, ಕಾರ್ಯಗಳು ಸುಲಲಿತವಾಗಿ ನಡೆಯುತ್ತವೆ. ಒಗ್ಗಟ್ಟು, ಸಾಂಕ ಹೋರಾಟ ಮತ್ತಿತರ ಮನೋಭಾವನೆಗೆ ಕ್ರೀಡೆ ಸಹಕಾರಿ ಎಂದರು.

ಈ ಸಂದರ್ಭದಲ್ಲಿ ಪ್ರಬಾರ ಬಿಇಒ ಸುರೇಶ್‍ರೆಡ್ಡಿ, ಎಸ್‍ಇಎಸ್ ಮಾಡ್ರನ್ ಶಾಲೆ ಕಾರ್ಯದರ್ಶಿ ಮುನಿಯನಾಯ್ಕ, ಎಸ್ಸಿ,ಎಸ್ಟಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಪಿ.ಎಸ್ ಅರವಿಂದ್, ಸಮನ್ವಯಾಧಿಕಾರಿ ಡಿ.ಡಿ ಹಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತೇಶ್, ವೀರೇಶ್, ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಹಮದ್ ಅಲಿ, ಹಿರೇಮಲ್ಲನಹೊಳೆ ಲೋಕೇಶ್ ಸೇರಿದಂತೆ ಮತ್ತಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!