suddivijaya news, 8/5/2024
ಸುದ್ದಿವಿಜಯ, ಜಗಳೂರು: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ (ಗುರುವಾರ, ಮೇ.9) ರಂದು ಬೆಳಿಗ್ಗೆ 10.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಾಳೆ ಬೆಳಿಗ್ಗೆ 10.30ಕ್ಕೆ ಸುದ್ದಿಗೋಷ್ಠಿ ಕರೆದಿದೆ. ಬಳಿಕ ಮಂಡಳಿ ಜಾಲತಾಣ
https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ನಾಳೆ ಮಧ್ಯಾಹ್ನ ಆಯಾ ಶಾಲೆಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‍ಗಳಿಗೆ ಎಸ್‍ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿದೆ.
ಮಾರ್ಚ್ 25 ರಿಂದ ಏ.6ರವರೆಗೆ ರಾಜ್ಯದ 2750 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕೀಯರು ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದಾರೆ.
ಇದೇ ಮೊದಲ ಬಾರಿಗೆ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಮೇ ಮೂರನೇ ವಾರದಲ್ಲೇ ಎರಡನೇ ಪರೀಕ್ಷೆ ಆರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಅಂಕಗಳನ್ನು ವೃದ್ಧಿಸಿಕೊಳ್ಳು ಉಳಿದ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಗಳು ಬರುತ್ತವೆಯೋ ಅದರ ಅಂಕಪಟ್ಟಿ ಪಡೆಯಬಹುದು.