ಸುದ್ದಿವಿಜಯ, ಜಗಳೂರು: ತಾಲ್ಲೂಕಿನ ತೋರಣಗಟ್ಟೆ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ 2ನೇ ಬಾರಿಗೆ ಸರಕಾರ ನಿಗಧಿ ಪಡಿಸಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಲಿಂಗಣ್ಣನಹಳ್ಳಿ ಗ್ರಾಮದ ಸದಸ್ಯೆ ಜೆ.ರೂಪಾ ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಹಿನ್ನೆಲೆ ತೋರಣಗಟ್ಟೆ ಗ್ರಾಮದ ಟಿ.ಜಿ.ಬಾಲಪ್ಪ ಅವಿರೋಧವಾಗಿ ಆಯ್ಕೆಯಾದರು. ಉಳಿದ ಸದಸ್ಯರಲ್ಲಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.
ಈ ವೇಳೆ ಗ್ರಾಪಂ ಸದಸ್ಯರಾದ ಕಟ್ಟಿಗೆಹಳ್ಳಿಯ ಭಾರತಿ ಮಂಜುನಾಥ್, ಜಮ್ಮಾಪುರ ಸದಸ್ಯ ಬಸವರಾಜಪ್ಪ, ಬಾಲಪ್ಪ, ಪಿಡಿಒ ವಾಸು, ಶ್ರೀನಿವಾಸ್, ಸಿದ್ದಲಿಂಗಮ್ಮ, ಈರಮ್ಮ, ಈರಜ್ಜ, ಈರಣ್ಣ, ಶ್ವೇತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.