ಸುದ್ದಿವಿಜಯ, ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ ನಮ್ಮವರೇ ನಮ್ಮನ್ನು ಸೋಲಿಸಿದ್ದಾರೆ ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.
ದಾವಣಗೆರೆಯ ರೇಣುಕ ಮಂದಿರದಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, ಮಾತನಾಡಿ, ನಮ್ಮನ್ನು ಬೇರ್ಯಾರು ಸೋಲಿಸಿಲ್ಲ, ನಮ್ಮವರೇ ನಮ್ಮನ್ನು ಸೋಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಜಗಳೂರಿಗೆ ಕೇಳಿದಷ್ಟು ಹಣ ಕೊಟ್ಟಿದ್ದಾರೆ.
ಅಭಿವೃದ್ಧಿ ಗಾಗಿ ಸಾಕಷ್ಟು ಕೆಲಸ ಮಾಡಲಾಗಿದೆ. ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದರೂ ಸೋಲಾಗಿದೆ. ಇಷ್ಟಾಗಿಯೂ ಸೋಲುತ್ತೇವೆ ಅಂದ್ರೆ ನಮ್ಮವರೇ ನಮ್ಮನ್ನು ಸೋಲಿಸಿದರು ಎಂದು ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಹೇಳಿದ್ದಾರೆ.
874 ಮತಗಳಿಂದ ನಾನು ಸೋತೆ, 1 ಮತದಿಂದ ಸೋತರೂ ಅದು ಸೋಲೇ. ಅಭಿವೃದ್ಧಿ ಕೆಲಸ ಮಾಡುವವರು ಜನರಿಗೆ ಬೇಡವಾಗಿದ್ದಾರೆ ಎಂದು ಸ್ವಪಕ್ಷದವರ ವಿರುದ್ಧವೇ ರಾಮಚಂದ್ರ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುತದೊಂದಿಗೆ ಗೆದ್ದು ಅಧಿಕಾರಕ್ಕೇರಿದ್ದರೆ ಬಿಜೆಪಿ ಕೇವಲ 65 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂದಿತ್ತು. ಇನ್ನಾದರೂ ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬರಲಿದ್ದು, ಕಾರ್ಯಕರ್ತರು ಎಲ್ಲರೂ ಒಂದಾಗಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದರು.