ಸುದ್ದಿವಿಜಯ ಜಗಳೂರು. ಭಾರತ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿ ಸರ್ವರಿಗೂ ಸಮಾನತೆಯೊದಗಿಸಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ತಾಲೂಕಾಧ್ಯಕ್ಷ ಎನ್.ಆರ್ ರಾಜೇಶ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಎಸ್ಸಿ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಆಗಿದೆ ಎಂದು ಅಭಿಪ್ರಾಯ ಪಟ್ಟರು.
ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿAದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ವಿಶೇಷತೆಯಾಗಿದೆ ಎಂದರು.
ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ. ನವೆಂಬರ್ ೨೬ ರಂದು ಸಂವಿಧಾನ ದಿನ ಆಚರಿಸುವಂತೆ ೨೦೧೫ ರ ನವೆಂಬರ್ ೧೯ ಎಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಇದಕ್ಕೂ ಮೊದಲು ೨೦೧೫ರ ಅಕ್ಟೋಬರ್ ೧೧ ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ ೨೬ ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದ್ದರು. ಅದರಂತೆ ಪ್ರತಿ ವರ್ಷ ನವೆಂಬರ್ ೨೬ ರಂದು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮೋರ್ಚಾದ ಮಂಡಲ ಕಾರ್ಯದರ್ಶಿ ಬಸವರಾಜ್. ಪ.ಪಂ ಸದಸ್ಯರಾದ ಆರ್. ತಿಪ್ಪೇಸ್ವಾಮಿ, ಪಾಪಲಿಂಗಪ್ಪ, ಎಸ್.ಸಿದ್ದಪ್ಪ, ಯುವ ಮೋರ್ಚಾ ಅಧ್ಯಕ್ಷ ಸೂರ್ಯಕಿರಣ್, ಒಬಿಸಿ ಅಧ್ಯಕ್ಷ ಎನ್. ಖಾಸೀಂ, ಮುಖಂಡರಾದ ಓಬಣ್ಣ, ಎಚ್ ರಮೇಶ್, ಓಬಳೇಶ್, ಗೌರಿಪುರ ಶಿವಣ್ಣ, ಕುಬೇರಪ್ಪ, ರಘು ಸೇರಿದಂತೆ ಮತ್ತಿತರಿದ್ದರು.