ಸುದ್ದಿವಿಜಯ, ಕಾನಹೊಸಳ್ಳಿ:ಬೊಲೆರೊ ಗೂಡ್ಸ್ ವಾಹನವೊಂದರಲ್ಲಿ ಆಕ್ರಮವಾಗಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.52ಲಕ್ಷಹಣವನ್ನು ಕಾನಹೊಸಹಳ್ಳಿ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಚೆಕಪೋಸ್ಟ್ ಬಳಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ಜರುಗಿದೆ.
ರಾಷ್ಟ್ರೀಯ ಹೆದ್ದಾರಿ 50ರ ಮಾರ್ಗವಾಗಿ ಚಿತ್ರದುರ್ಗದಿಂದ ಕೊಪ್ಪಳ ಜಿಲ್ಲೆಗೆ ಹೋಗುತ್ತಿದ್ದ ಗೂಡ್ಸ್ ವಾಹನವನ್ನು ಚೆಕ್ ಪೋಸ್ಟ್ ಸಿಬ್ಬಂದಿ ಶುಕ್ರವಾರ ಮುಂಜಾನೆ ತಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಅವರ ಬಳಿ ಇದ್ದ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ.
ಹಣವನ್ನು ವಶಕ್ಕೆ ಪಡೆದಿದ್ದು, ವಾಹನದಲ್ಲಿದ್ದ ನರಸೆಗೌಡ ಎಂಬುವವರ ವಿರುದ್ದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.