ಸುದ್ದಿವಿಜಯ, ಜಗಳೂರು: ಮಾಜಿ ಶಾಸಕ ಎಚ್.ಪಿ.ರಾಜೇಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಉಚ್ಛಾಟನೆ ಮಾಡಲಾಗಿದೆ.
ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಎಚ್ಚರಿಕೆ ನೀಡಿದೆ.
ಅಷ್ಟೇ ಅಲ್ಲದೇ ಉಚ್ಛಾಟನೆ ಮಾಡಿದವರ ಜೊತೆ ಕಾಂಗ್ರೆಸ್ ಮುಖಂಡರಾಗಲಿ, ಬ್ಲಾಕ್ ಮಟ್ಟದ ಮುಖಂಡರಾಗಲಿ ಗುರುತಿಸಿಕೊಂಡಲ್ಲಿ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಭಾನುವಾರ ಸಿದ್ದರಾಮಯ್ಯ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ದೇವೇಂದ್ರಪ್ಪ ಪರ ಮತಯಾಚನೆ ವೇಳೆ ರಾಜೇಶ್ ಅವರನ್ನು ಉಚ್ಛಾಟನೆ ಮಾಡುವುದಾಗಿ ಬಹಿರಂಗವಾಗಿ ಘೋಷಿಸಿದ್ದರು. ಅದೇ ರೀತಿ ಇಂದು ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶವಹೊರಡಿಸಿದೆ.