ಸುದ್ದಿವಿಜಯ, ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಅಂತ್ಯವಗಿದ್ದು, ಇಂದು (ಏ.21)ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಫಲಿತಾಂಶ ಘೋಷಣೆ ಹಿನ್ನೆಲೆ ಇಂದು ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು ನಂತರ 11 ಗಂಟೆಗೆ ಫಲಿತಾಂಶ ಅಧಿಕೃತ ವೆಬ್‌ಸೈಟ್ karresults.nic ನಲ್ಲಿ ನೋಡಬಹುದಾಗಿ ಹಾಗಾದ್ರೆ, ಆನ್ಲೈನ್ನಲ್ಲಿ ಫಲಿತಾಂಶ ನೋಡುವುದೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಅನುಸರಿ ನೋಡಬಹುದು. ಹಾಗೇ ಸ್ಕೋರ್ ಕಾರ್ಡ್ ಡೌನ್‌ಲೌಡ್ ಮಾಡಿಕೊಳ್ಳಬಹುದು.
ಮಾರ್ಚ್ 2023 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 09/3/2023 ರಿಂದ 29/3/2023ರವರೆಗೆ ನಡೆಸಲಾಗಿತ್ತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
2022-23ನೇ ಶೈಕ್ಷಣೀಕ ಸಾಲಿನಲ್ಲಿ 7,27,387 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.
ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9 ರಿಂದ 29ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ಮೊಬೈಲ್‌ನಲ್ಲಿ karresults.nic ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ-2023 ಆಯ್ಕೆಯ ಮೇಲೆ ಒತ್ತಿ ವಿದ್ಯಾರ್ಥಿಗಳ ರಿಜಿಸ್ಟ್ರರ್ ನಂ ನಮೂದಿಸಿ ವಿಷಯ ಆಯ್ಕೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗದ ವಿಷಯವನ್ನು ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಫಲಿತಾಂಶ ಗೋಚರವಾಗಲಿದೆ.